alex Certify BREAKING: ಸಿದ್ದರಾಮಯ್ಯ ಸೆನ್ಸಿಟಿವ್ ಮನುಷ್ಯ, 2 ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ: ಕೇಂದ್ರ ಸಚಿವ ಸೋಮಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿದ್ದರಾಮಯ್ಯ ಸೆನ್ಸಿಟಿವ್ ಮನುಷ್ಯ, 2 ದಿನದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ: ಕೇಂದ್ರ ಸಚಿವ ಸೋಮಣ್ಣ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೆನ್ಸಿಟಿವ್ ಮನುಷ್ಯ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಎರಡು ದಿನದಲ್ಲಿ ಸಿದ್ಧರಾಮಯ್ಯ ಅವರು ರಾಜೀನಾಮೆ ಕೊಡುತ್ತಾರೆ ಎಂದು ಭಾವಿಸಿದ್ದೇನೆ. ನನ್ನ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದರು. ಆ ಪುಸ್ತಕ ಎಲ್ಲಿ ಕಳೆದು ಹೋಗಿದೆ ಗೊತ್ತಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸೋಮಣ್ಣ, ಮುಡಾ ಕೇಸ್ ನಲ್ಲಿ ಹೈಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ನ್ಯಾಯಾಂಗ ವ್ಯವಸ್ಥೆಯಲ್ಲಿ ಕಾನೂನು ದೊಡ್ಡದು. ನಾನು ಸಿದ್ದರಾಮಯ್ಯ ಅವರನ್ನು ಹತ್ತಿರದಿಂದ ನೋಡಿದ್ದೇನೆ. ಸಿದ್ದರಾಮಯ್ಯನವರು ಗಾಂಭೀರ್ಯ ಅರ್ಥಮಾಡಿಕೊಳ್ಳಬೇಕು. ತಪ್ಪು ಮಾಡುವುದು ಸಹಜ. ಆದರೆ, ತಿದ್ದಿಕೊಳ್ಳಬೇಕು. ಹೈಕೋರ್ಟ್ ಆದೇಶ ಗೌರವಿಸಿ ಸಿಎಂ ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ರಾಜೀನಾಮೆಗೆ ಕೇಂದ್ರ ಸಚಿವ ಸೋಮಣ್ಣ ಆಗ್ರಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...