
ಬೆಂಗಳೂರು: ನೀಟ್ ಪರೀಕ್ಷೆ, ಒನ್ ನೇಷನ್ ಒನ್ ಎಲೆಕ್ಷನ್, ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆಯಂತಹ ಕೇಂದ್ರದ ನೀತಿಗಳ ಅಭಿವೃದ್ಧಿ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.
ಕೇಂದ್ರದ ರಾಜ್ಯ ವಿರೋಧಿ ನೀತಿಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಅಧಿವೇಶನದಲ್ಲಿ ನಿರ್ಣಯ ಮಂಡನೆಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಕೇಂದ್ರದಿಂದ ನಡೆಯುವ ನೀಟ್ ಪ್ರವೇಶ ಪರೀಕ್ಷೆ, ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ, ಒಂದು ದೇಶ ಒಂದು ಚುನಾವಣೆಯಂತಹ ಕೇಂದ್ರದ ಪ್ರಸ್ತಾವನೆಗಳನ್ನು ವಿರೋಧಿಸಿ ವಿಧಾನ ಮಂಡಲದಲ್ಲಿ ನಿರ್ಣಯ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ನೀಟ್ ರದ್ದು ಪಡಿಸಬೇಕು. ಈ ಹಿಂದೆ ಇದ್ದಂತೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಸೀಟು ಹಂಚಿಕೆಗೆ ಅವಕಾಶ ಕೊಡಬೇಕು.
2026ರಲ್ಲಿ ವಿಧಾನಸಭೆ, ಲೋಕಸಭೆ ಕ್ಷೇತ್ರಗಳ ಮರುವಿಂಗಡಣೆ ಮಾಡಬಾರದು. ಇದರಿಂದ ಶಾಸಕರ ಸಂಖ್ಯೆ ಕುಸಿತವಾಗುತ್ತದೆ.
ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವದ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದ್ದು, ಅದನ್ನು ಜಾರಿಗೊಳಿಸಬಾರದು ಎಂದು ನಿರ್ಣಯ ಕೈಗೊಳ್ಳಲಾಗಿದೆ.