ಕಾರವಾರ: ಗೋ ಹತ್ಯೆ ಮಾಡಿದವರಿಗೆ ಮಸೀದಿಯಿಂದ ಬಹಿಷ್ಕಾರ ಹಾಕುವಂತೆ ಭಟ್ಕಳದ ತಂಜಿಂ ನಿರ್ಣಯ ಮಾಡಿದ್ದು, ಇದೊಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ. ನಾರಾಯಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಟ್ಕಳದಲ್ಲಿ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಎಲ್ಲಾ ಅಕ್ರಮ ಕಸಾಯಿಖಾನೆಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿದೆ. ಗೋ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ವಾಸಿಮ್, ಮುಜಾಮಿಲ್ ಬಂಧನವಾದ ಬಳಿಕ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
ಆರೋಪಿ ಫೈಜಾನ್ ಗೆ ಕಾರವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ತೌಫೀಕ್ ಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.