ಬೆಂಗಳೂರು : ತುಮಕೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2 ರ ಬೆಳಗ್ಗೆ 8 ಗಂಟೆವರೆಗೆ ತುಮಕೂರಿನ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಹೊಸ ವರ್ಷಾಚರಣೆ ವೇಳೆ ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ವೇಳೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ನೀಡಿದ್ದಾರೆ.