ಬೆಂಗಳೂರು: ಅರಣ್ಯ ಪ್ರದೆಶಕ್ಕೆ ಹೊಂದಿಕೊಂಡ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಮನೆ, ಕಟ್ಟಡಗಳ ನಿರ್ಮಾಣಕ್ಕೆ ಇದ್ದ ನಿರ್ಬಂಧವನ್ನು ಸಡಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈವರೆಗೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇದ್ದ ಒಂದು.ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ಇರಲಿಲ್ಲ. ಈಗ ನಿರ್ಬಂಧ ಸಡಿಸಲಾಗಿದೆ ಎಂದರು.
ಈ ವ್ಯಾಪ್ತಿಯಲ್ಲಿ ಫಾರ್ಮ್ ಹೌಸ್, ರೆಸಾರ್ಟ್, ಸಾ ಮಿಲ್, ಪವನ ವಿದ್ಯುತ್ ಘಟಕಗಳನ್ನು ನಿರ್ಮಾಣ ಮಾಡಬಹುದು ಅದಕ್ಕೆ ಅನುಮತಿ ದೊರೆಯಲಿದೆ. ರಾಜ್ಯದಲ್ಲಿ ಸುಮಾರು 35 ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ಪೈಕಿ 29 ಪ್ರದೇಶಗಳಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡಲು ಸಹಮತ ವ್ಯಕ್ತವಾಗಿತ್ತು. ನಾಗರಹೊಳೆ ಸೇರಿದಂತೆ ಇನ್ನು 6 ಪ್ರದೇಶಗಳಲ್ಲಿ ನಿಯಮ ಸಡಿಸಲು ಸಂಪುಟ ಉಪಸಮಿತಿ ಸಭೆಯಲ್ಲಿ ಸಹಮತ ವ್ಯಕ್ತವಾಗಿದೆ ಎಂದು ತಿಳಿಸಿದರು.