ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಗಸ್ಟ್ ಅಂತ್ಯದೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಆಗಸ್ಟ್ ಅಂತ್ಯದೊಳಗೆ 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಅಕ್ಟೋಬರ್ ನಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.
ಸರ್ಕಾರಿ ಕನ್ನಡ ಮಾಧ್ಯಮ ಶಾಲೆ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲಿದ್ದು, ಇಂಗ್ಲಿಷ್ ಶಿಕ್ಷಕರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗಿದೆ. 23 ಸಾವಿರಕ್ಕೂ ಹೆಚ್ಚು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ಪೂರ್ಣಗೊಂಡಿದೆ. ಅನುದಾನಿತ ಶಾಲೆಗಳ ಖಾಲಿ ಬೋಧಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದರು.