ಬೆಂಗಳೂರು: ನಾಳೆ ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ವಿಜಯೋತ್ಸವ ಆಚರಣೆಗೆ ಚುನಾವಣೆ ಆಯೋಗ ಬ್ರೇಕ್ ಹಾಕಿದೆ.
ಸಂಭ್ರಮಾಚರಣೆ, ಮೆರವಣಿಗೆ ನಡೆಸುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ. ವಿಜಯೋತ್ಸವ ಕೂಡ ಸಂಪೂರ್ಣ ನಿಷೇಧಿಸಲಾಗಿದೆ. ಚುನಾವಣಾಧಿಕಾರಿಗಳಿಗೆ ಆಯೋಗದಿಂದ ಸೂಚನೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.
ಉಪ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಳೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಆರಂಭದಲ್ಲಿ ಅಂಚೆ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಮಧ್ಯಾಹ್ನದೊಳಗೆ ಫಲಿತಾಂಶ ಹೊರ ಬೀಳಲಿದೆ.