ಬೆಂಗಳೂರು: ರಾಜ್ಯಸಭೆ ಚುನಾವಣೆ ಮೊದಲ ಪ್ರಾಶಸ್ತ್ಯದ ಮತಎಣಿಕೆ ಮುಕ್ತಾಯವಾಗಿದೆ. ಬಿಜೆಪಿ ಮೊದಲನೇ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ 46 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಮೊದಲನೇ ಅಭ್ಯರ್ಥಿ ಜೈರಾಂ ರಮೇಶ್ 46 ಮತ ಪಡೆದಿದ್ದು, ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ 25 ಮತ ಪಡೆದುಕೊಂಡಿದ್ದಾರೆ.
ಬಿಜೆಪಿ ಎರಡನೇ ಅಭ್ಯರ್ಥಿ ಜಗ್ಗೇಶ್ 44, ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ 33, ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ 30 ಮತ ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿ ಮನ್ಸೂರ್ ಅಲಿಖಾನ್, ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪರಾಭವಗೊಂಡಿದ್ದಾರೆ. ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ 3 ಕಾಂಗ್ರೆಸ್ 1 ಸ್ಥಾನ ಗಳಿಸಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಜೆಡಿಎಸ್ 32, ಕಾಂಗ್ರೆಸ್ 69, ಬಿಜೆಪಿ 120 ಸದಸ್ಯ ಬಲ ಹೊಂದಿವೆ. ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎನ್ನಲಾಗಿದೆ.