ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ ಎಂಬ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಫಲಿತಾಂಶಕ್ಕೆ ಕಾಯುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. 17 ಶಾಸಕರು ಪರೀಕ್ಷೆಯಲ್ಲಿ ಪಾಸಾಗಿದ್ದೇವೆ. ಫಲಿತಾಂಶಕ್ಕಾಗಿ ಕಾಯಲು ಬೇರೆ ಯಾರು ಪರೀಕ್ಷೆ ಬರೆದಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಹೇಳಿದ್ದಾರೆ.