ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದ ಸಹಾಯಕರ ಪ್ರಾಧ್ಯಾಪಕರ ನೇಮಕಾತಿಗೆ ನಡೆದ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ಸೈಟ್ ನಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ.
ನವೆಂಬರ್ 24ರಂದು ಪರೀಕ್ಷೆ ನಡೆಸಲಾಗಿದ್ದು, ಇದಾದ 19 ದಿನಗಳಲ್ಲಿಯೇ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಒಟ್ಟು 16 ವಿಷಯಗಳ 24 ಹುದ್ದೆಗಳಿಗೆ ಒಟ್ಟು 1175 ಮಂದಿ ಪರೀಕ್ಷೆ ಬರೆದಿದ್ದರು. ಎಲ್ಲರೂ ಪತ್ರಿಕೆ 1 ಮತ್ತು ಪತ್ರಿಕೆ 2ರಲ್ಲಿ ಪಡೆದ ಅಂಕಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 14ರೊಳಗೆ ಸಲ್ಲಿಸಬೇಕು. ಅಂಕಪಟ್ಟಿ ಜೊತೆಗೆ ಅಂತಿಮ ಕೀ ಉತ್ತರಗಳನ್ನು ಕೂಡ ಬಿಡುಗಡೆ ಮಾಡಲಾಗಿದೆ. http://cetonline.karnataka.gov.in/kea/ ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.