alex Certify ನಿವೃತ್ತ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಮತ್ತೆ ಸೇವೆಗೆ ಬಳಸಿಕೊಳ್ಳಲು ಸರ್ಕಾರ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೃತ್ತ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಮತ್ತೆ ಸೇವೆಗೆ ಬಳಸಿಕೊಳ್ಳಲು ಸರ್ಕಾರ ಚಿಂತನೆ

ಬೆಂಗಳೂರು: ಸೇವೆಯಿಂದ ನಿವೃತ್ತರಾಗಿರುವ ಹಿರಿಯ ನಾಗರೀಕರ ಅನುಭವ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ.

ಸರ್ಕಾರಿ ಇಲಾಖೆಗಳಲ್ಲಿ ಪುನಃ ನಿವೃತ್ತ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರ ಅನುಭವ ಬಳಸಿಕೊಂಡು ಉತ್ತಮ ಆಡಳಿತ ನೀಡಲು ಸಂಬಂಧಿಸಿದ ಇಲಾಖೆ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಇದರಿಂದ ಯುವಕರಿಗೆ ತೊಂದರೆ ಆಗುವುದಿಲ್ಲ. ಯುವಕರಿಗೆ ಅವಕಾಶ ಕೊಡುವ ಉದ್ದೇಶದಿಂದ ಹಿರಿಯ ನೌಕರರಿಗೆ 60 ವರ್ಷ ತಲುಪಿದ ನಂತರ ನಿವೃತ್ತಿ ನೀಡಲಾಗುತ್ತಿದೆ. ಅದು ವೃತ್ತಿಯಿಂದ ಮಾತ್ರ ನಿವೃತ್ತಿಯೇ ಹೊರತೂ ಬದುಕಿನಿಂದ ಅಲ್ಲ. ಅವರ ಅನುಭವವನ್ನು ನಿವೃತ್ತಿ ನಂತರವೂ ಬಳಕೆ ಮಾಡಿಕೊಂಡು ಆಡಳಿತದಲ್ಲಿ ಸುಧಾರಣೆ ತರಲಾಗುವುದು ಎಂದರು.

ಹಿರಿಯ ನಾಗರಿಕರಿಗೆ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಿದ್ದು, 60 ವರ್ಷ ಮೇಲ್ಪಟ್ಟವರಿಗೆ ವರ್ಷಕ್ಕೆ ಎರಡು ಬಾರಿ ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆ ಜಾರಿಗೊಳಿಸಲಾಗುವುದು. ಸರ್ಕಾರದ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ದೃಷ್ಟಿ ದೋಷ, ಶ್ರವಣದೋಷ ಇರುವವರಿಗೆ ಚಿಕಿತ್ಸೆ ಮತ್ತು ಕನ್ನಡಕ, ಶ್ರವಣ ಸಾಧನ ಉಚಿತವಾಗಿ ನೀಡಲಾಗುವುದು ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...