ಬೆಂಗಳೂರು: ಬೆಂಗಳೂರಿನ ಜಿ.ಆರ್.ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಬಂಧನವಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ನಟಿ, ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಬಿಡುಗಡೆ ಬಳಿಕ ಪೊಲೀಸರ ವಿರುದ್ಧ ಆರೋಪ ಮಾಡಿದ್ದರು. ಇದೀಗ ಹೇಮಾ ವಿರುದ್ಧ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಹೇಮಾ ಪರ ವಾದ ಮಂಡಿಸಿದ್ದ ವಕೀಲರು, ಕೇವಲ ಇತರೆ ಸಾಕ್ಷಿಗಳ ಹೇಳಿಕೆ ಆಧರಿಸಿ ಹೇಮಾ ವಿರುದ್ಧ ಮಾದಕ ವಸ್ತು ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹೇಮಾ ಮಾದಕ ವಸ್ತು ಸೇವಿಸಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಪ್ರಕರಣದ ವಿಚಾರಣೆಗೆ ತಡೆ ನೀಡಿದ್ದು, ಪ್ರಾಸಿಕ್ಯೂಷನ್ ಗೆ ನೀಟಿಸ್ ನೀಡಿದೆ.