ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ. ಡಿಸೆಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತೆಲಂಗಾಣ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ ಮಾಡಿರುವುದನ್ನು ಘೋಷಣೆ ಮಾಡಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಪ್ರಚಾರದ ಮುಖ, ಅನುಮುಲಾ ರೇವಂತ್ ರೆಡ್ಡಿ ಅವರನ್ನು ದಕ್ಷಿಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆ.ಸಿ. ವೇಣುಗೋಪಾಲ್ ಮೊದಲಾದ ನಾಯಕರಲ್ಲದೆ ರಾಜ್ಯದಲ್ಲಿ ಹೊಸದಾಗಿ ಆಯ್ಕೆಯಾದ ಬಹುತೇಕ ಶಾಸಕರು ಇತರರಿಗಿಂತ ರೇವತ್ ರೆಡ್ಡಿಗೆ ಬೆಂಬಲ ನೀಡಿದ್ದಾರೆ. 64 ಕಾಂಗ್ರೆಸ್ ಶಾಸಕರ ಪೈಕಿ 42 ಮಂದಿ ರೇವಂತ್ ರೆಡ್ಡಿಯನ್ನು ಬೆಂಬಲಿಸಿದ್ದಾರೆ.