ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ ಭಾರತೀಯ ಸೇನೆಯ ಭದ್ರತಾ ಪಡೆಗಳು ಬೆಳಗ್ಗೆಯಿಂದ ಇಲ್ಲಿವರೆಗೆ ಮೂವರು ಉಗ್ರರ ರುಂಡ ಚೆಂಡಾಡಿದ್ದಾರೆ ಎಂದು ಹೇಳಲಾಗಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಹುತಾತ್ಮರಾದ ಮೂವರು ಯೋಧರ ಸಾವಿಗೆ ಪ್ರತೀಕಾರ ತೀರಿಸಿಕೊಂಡ ಭದ್ರತಾ ಪಡೆಗಳು ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರಲ್ಲಿ ಮೂವರು ಉಗ್ರರನ್ನು ಭಾರತೀಯ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ಭಯೋತ್ಪಾದಕರು ಮತ್ತು ಭಾರತೀಯ ಸೇನೆ ನಡುವೆ ನಡೆದ ಎನ್ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಗೀಡಾಗಿದ್ದಾರೆ. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವ ಯೋಧರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಯೋಧರ ಹತ್ಯೆಗೆ ಭಾರತೀಯ ಸೇನಾ ಪಡೆಗಳು ಪ್ರತೀಕಾರ ತೀರಿಸಿಕೊಂಡಿದ್ದಾರೆ.ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಕರ್ನಲ್ ಮನ್ ಪ್ರೀತ್ ಸಿಂಗ್ , ಮೇಜರ್ ಆಶಿಶ್ ಧೋಂಚಕ್, ಡಿವೈಎಸ್ಪಿ ಹ್ಯುಮನ್ಯು ರವರು ಹುತಾತ್ಮರಾಗಿದ್ದರು.