
ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯ ಸೇವೆಗಳನ್ನು ಭಾನುವಾರವೂ ಪಡೆದುಕೊಳ್ಳಬಹುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರೋಟೇಶನ್ ಆದರದಲ್ಲಿ ಭಾನುವಾರ ಪ್ರತಿ ಜಿಲ್ಲೆಯಲ್ಲಿ ಒಂದು ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲಾಗುತ್ತದೆ. ಮೊದಲಿಗೆ ಬೆಂಗಳೂರಿನಲ್ಲಿ ಈ ವ್ಯವಸ್ಥೆ ಜಾರಿಗೊಳಿಸುತ್ತಿದ್ದು, ಏಪ್ರಿಲ್ ನಿಂದ ಇತರೆ ನಗರಗಳಲ್ಲಿಯೂ ಆರಂಭಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ರಾಜ್ಯದ ಜನರು ಭಾನುವಾರವೂ ಕಂದಾಯ ಇಲಾಖೆ ಸೇವೆಗಳನ್ನು ಪಡೆದುಕೊಳ್ಳಬಹುದು. ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.