ಬೆಂಗಳೂರು: ಕಂದಾಯ ಇಲಾಖೆಯ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ. ಈ ಮೊದಲು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ಪ್ರಕಟಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿತ್ತು. ಇದೀಗ ಪರಿಸ್ಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು, ಮೇ 4ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 7 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.