
ವಿಜಯಪುರ: ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಹಂತದಲ್ಲಿ ಆರು ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ.
ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳಿಂದ ಹಿಡಿದು ತಹಶೀಲ್ದಾರ್ ವರೆಗೆ ಎಲ್ಲ ದಾಖಲೆ ಸೇವೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಪಾವತಿ ಖಾತೆ ಮೊದಲಾದ ಸಣ್ಣ ಸೇವೆ ಹೊರತಾಗಿ ಉಳಿದೆಲ್ಲವೂ ಡಿಜಿಟಲೀಕರಣಗೊಳ್ಳಲಿದ್ದು, ಈಗಾಗಲೇ ಸಾಫ್ಟ್ವೇರ್ ಕೂಡ ಸಿದ್ದಪಡಿಸಲಾಗಿದೆ. ನಿಯಮಾವಳಿ ಮಾತ್ರ ಜಾರಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.
ಪ್ರಾಯೋಗಿಕ ಹಂತದಲ್ಲಿ ಜಾರಿಗೊಳಿಸಿದ ನಂತರ ಸಾಧಕ ಬಾಧಕ ಗಮನಿಸಿ ರಾಜ್ಯಾದ್ಯಂತ ಇದನ್ನು ಜಾರಿಗೊಳಿಸಲಿದ್ದು, ರೆಕಾರ್ಡ್ ರೂಂ ಡಿಜಿಟಲೀಕರಣವಾದರೆ ಎಲ್ಲರಿಗೂ ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ನೀಡಲು ಚಿಂತನೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.