
ಬೆಳಗಾವಿ: ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಆಕಾಂಕ್ಷೆಯುಳ್ಳ 60 ತಾಲೂಕುಗಳಲ್ಲಿನ ವಿಜ್ಞಾನ ಸಂಯೋಜನೆ ಹೊಂದಿರುವ 60 ಪದವಿ ಪೂರ್ವ ಕಾಲೇಜುಗಳನ್ನು ಆದರ್ಶ ಪದವಿ ಪೂರ್ವ ಕಾಲೇಜುಗಳಾಗಿ ಪರಿವರ್ತಿಸಲು ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಯೋಜನೆಗೆ ಆಯ್ಕೆಯಾದ ಪ್ರತಿ ತಾಲೂಕಿಗೆ 83.30 ಲಕ್ಷ ರೂ.ರಂತೆ ಒಟ್ಟು 50 ಕೋಟಿ ರೂ. ಒದಗಿಸಲಾಗುವುದು.