ಮೈಸೂರು: ಪೌತಿ ಖಾತೆ ಪಡೆದುಕೊಳ್ಳಲು ಸಾಧ್ಯವಾಗದೆ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ರಾಜ್ಯದಲ್ಲೇ ಪೌತಿ ಖಾತೆ ಆಂದೋಲನ ನಡೆಸಲು ಉದ್ದೇಶಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಪೌತಿ ಖಾತೆ ಆಂದೋಲನವನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದು, ಇದರ ಸಾಧಕ ಬಾಧಕ ನೋಡಿಕೊಂಡು ರಾಜ್ಯದೆಲ್ಲೆಡೆ ಪೌತಿ ಖಾತೆ ಆಂದೋಲನ ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಕಂದಾಯ ಇಲಾಖೆಯಲ್ಲಿ ದಾಖಲೆ ಕಳವು, ತಿದ್ದುಪಡಿ, ಮೂಲ ದಾಖಲೆ ಇಲ್ಲದಿರುವ ದೂರುಗಳು ಹೆಚ್ಚಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಡಿಜಟಲೀಕರಣ ಅಭಿಯಾನ ಕೈಗೊಂಡಿದ್ದು, ವರ್ಷಾಂತ್ಯಕ್ಕೆ ಪೂರ್ಣಗೊಳ್ಳಲಿದೆ. ಇದರಿಂದ ಸಾರ್ವಜನಿಕರಿಂದ ವಸೂಲಿ, ಶೋಷಣೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ರೆಕಾರ್ಡ್ ಸಂಪರ್ಕಿಸದೆ ಆನ್ಲೈನ್ ಮೂಲಕವೇ ದಾಖಲೆ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.