ಬೆಂಗಳೂರು: ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
2018 ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ ಮೃತಪಟ್ಟಿದ್ದರು. ಮತ್ತೊಮ್ಮೆ ಇಂತಹ ಕಹಿ ಘಟನೆ ಸಂಭವಿಸಬಾರದು. ಈ ಬಾರಿ ಮೂಡಿಗೆರೆ, ಸುಳ್ಯ, ಭಾಗಮಂಡಲ, ಮಡಿಕೇರಿ, ವಿರಾಜಪೇಟೆ, ಸಕಲೇಶಪುರ ಸೇರಿ ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕೆಂದು ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
ಮಳೆ ನಿರ್ವಹಣೆಗೆ ಬೆಂಗಳೂರಿಗೆ 250 ಕೋಟಿ ರೂ ಹೆಚ್ಚುವರಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಬೆಂಗಳೂರಿನಲ್ಲಿ ಪ್ರತಿ ಮಳೆಗಾಲದಲ್ಲಿಯೂ ಪ್ರವಾಹ ಸ್ಥಿತಿ ತಲೆದೋರಿದೆ. ನಾಯಂಡಹಳ್ಳಿ, ಹೆಬ್ಬಾಳ, ನಾಗವಾರ ಸೇರಿ ಹಲವು ಕಡೆ ಸಮಸ್ಯೆ ಆಗಲಿದೆ. ಬೆಂಗಳೂರಿನಲ್ಲಿ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ವರದಿ ಸಲ್ಲಿಸಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.