ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಿಂದಿನ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ದೂಷಿಸುವ ರಾಜಕೀಯ ಬಜೆಟ್ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಒಂದು ಕಡೆ ಗ್ಯಾರಂಟಿ ಯೋಜನೆ ಘೋಷಿಸಿ, ಇನ್ನೊಂದು ಕಡೆ ಜನರಿಗೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ. ಜನಸಾಮಾನ್ಯರಿಗೂ ಹೊರೆ ಹಾಗುಅವಂತಹ ಬಜೆಟ್ ಇದು, ಹಾಗಾಗಿ ಇದೊಂದು ರಿವರ್ಸ್ ಗೇರ್ ಬಜೆಟ್ ಎಂದು ಟೀಕಿಸಿದ್ದಾರೆ.
ನಮ್ಮದು 77 ಸಾವಿರ ಕೋಟಿ ಸಾಲ ಇದ್ದದ್ದು, ಈಗ 88 ಸಾವಿರ ಕೋಟಿಗೆ ಹೆಚ್ಚಿಸಿದ್ದಾರೆ. ಬಜೆಟ್ ಗಾತ್ರ 3.27 ಲಕ್ಷ ಕೋಟಿ ಮಾಡಿದ್ದಾರೆ. ಜನರಿಗೆ ಸುಳ್ಳು ಬರವಸೆ ನೀಡಿದ್ದಾರೆ. ಶಿಕ್ಷಣ, ಆರೋಗ್ಯ, ಕೃಷಿ, ಪಿಡಬ್ಲುಡಿ, ನೀರಾವರಿ, ಯೋಜನೆಗಳಿಗೆ ಅನುದಾನ ಪ್ರಮಾಣ ಕಡಿಮೆ ಮಾಡಿದ್ದಾರೆ. ಹೆಚ್ಚಿನ ಅನುದಾನ ನೀಡದೆ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
ಇನ್ನು ರಾಜ್ಯಪಾಲರ ಭಾಷಣಕ್ಕು ಬಜೆಟ್ ನಲ್ಲಿರುವ ಅಂಶಗಳಿಗೂ ವ್ಯತ್ಯಾಸವಿದೆ. ಆರ್ಥಿಕ ಶಿಸ್ತಿಗೆ ಬಜೆಟ್ ನಲ್ಲಿ ಆದ್ಯತೆ ಇಲ್ಲ. ಇದೊಂದು ನಿರಾಶಾದಾಯಕ, ರಿವರ್ಸ್ ಗೇರ್ ಬಜೆಟ್ ಎಂದು ಹೇಳಿದರು.