alex Certify ಅತಿಥಿ ಉಪನ್ಯಾಸಕರ ಗೌರವಧನ ಪರಿಷ್ಕರಣೆ: ಮಾಹಿತಿ ನೀಡಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರ ಗೌರವಧನ ಪರಿಷ್ಕರಣೆ: ಮಾಹಿತಿ ನೀಡಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಹಿತಿ ನೀಡುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

2023 -24ನೇ ಸಾಲಿನಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ ನೇಮಕವಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಈಗಾಗಲೇ ಫೆಬ್ರವರಿವರೆಗೆ ಗೌರವ ಧನ ಬಿಡುಗಡೆ ಮಾಡಲಾಗಿದೆ. ಸೇವಾವಧಿ ಆಧಾರದಲ್ಲಿ ಗೌರವಧನ ಪರಿಷ್ಕರಣೆ ಮಾಡಬೇಕಿದೆ. 2024ರ ಜನವರಿಯಿಂದಲೇ ವ್ಯತ್ಯಾಸವಾದ ಗೌರವಧನ ಸರಿಪಡಿಸಬೇಕಿರುವ ಕಾರಣ ಅತಿಥಿ ಉಪನ್ಯಾಸಕರ ಮಾಹಿತಿಯನ್ನು ಗೂಗಲ್ ಫಾರಂನಲ್ಲಿ ಅಪ್ಲೋಡ್ ಮಾಡಬೇಕು ಮತ್ತು ಇ-ಮೇಲ್  dcegfbudgt@gmail.com ಗೆ ಕಳುಹಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...