alex Certify BREAKING NEWS: 1 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: RFO, ಚಾಲಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 1 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: RFO, ಚಾಲಕ ಅರೆಸ್ಟ್

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಆರ್.ಎಫ್.ಒ. ಮತ್ತು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವಲಯ ಅರಣ್ಯ ಅಧಿಕಾರಿ ಪುಟ್ಟಸ್ವಾಮಿ, ವಾಹನ ಚಾಲಕ ಪ್ರಸನ್ನಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು.

ಸ್ಟೋನ್ ಕ್ರಷರ್ ಗೆ ಎನ್ಒಸಿ ನೀಡಲು 10 ಲಕ್ಷ ರೂಪಾಯಿ ಲಂಚಕ್ಕೆ ಪುಟ್ಟಸ್ವಾಮಿ ಬೇಡಿಕೆ ಇಟ್ಟಿದ್ದರು. ಚಾಲಕ ಪ್ರಸನ್ನಕುಮಾರ್ ಮೂಲಕ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.

ಸಂತೋಷ್ ಎಂಬುವರಿಂದ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಆರ್.ಎಫ್.ಒ. ಪುಟ್ಟಸ್ವಾಮಿ ಮತ್ತು ಚಾಲಕ ಪ್ರಸನ್ನಕುಮಾರ್ ಅವರನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...