alex Certify ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ಕೊಡಲಿ: ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ಕೊಡಲಿ: ವಿಜಯೇಂದ್ರ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು ಎಂದು ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ಸೇರಿಸಿಕೊಂಡು 10 ಕೆಜಿ ಲೆಕ್ಕ ಹೇಳುತ್ತಿದ್ದಾರೆ. ಇದು ಸರಿಯಲ್ಲ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಜತೆ ಕಾಂಗ್ರೆಸ್ ಘೋಷಣೆ ಮಾಡಿದಂತೆ 10 ಕೆಜಿ ಅಕ್ಕಿ ಸೇರಿಸಿ ಪ್ರತಿ ಕುಟುಂಬಕ್ಕೆ ಸದಸ್ಯರಿಗೆ 15 ಕೆಜಿ ಅಕ್ಕಿ ಕೊಡಬೇಕು ಎಂದು ಹೇಳಿದ್ದಾರೆ.

ಪಡಿತರದಾರರಿಗೆ ವಿತರಿಸುವ ಅಕ್ಕಿಯನ್ನು ಬೇರೆ ರಾಜ್ಯದಿಂದ ಖರೀದಿಸುವ ಬದಲು ನಮ್ಮ ರಾಜ್ಯದ ರೈತರಿಂದಲೇ ಖರೀದಿಸಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...