ಬೆಂಗಳೂರು: ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಹೊಂದಿಸಲು ಸಾಧ್ಯವಾಗದ ಕಾರಣ 5 ಕೆಜಿ ಅಕ್ಕಿ ಹಾಗೂ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡುವುದನ್ನು ಮುಂದುವರಿಸಲಾಗುತ್ತದೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು.
ಆಹಾರ ಇಲಾಖೆ ಸಚಿವ ಕೆಎಸ್ ಮುನಿಯಪ್ಪ ಇತ್ತೀಚೆಗೆ ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು. ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ. 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ ಮಾಡಲಾಗುವುದು.