ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಆಹಾರ ಧಾನ್ಯ ಗೋದಾಮಿನಲ್ಲಿ ಸುಮಾರು 2.66 ಕೋಟಿ ರೂಪಾಯಿ ಮೌಲ್ಯದ 6,000 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆಯಾಗಿದೆ.
ಶಹಾಪುರ ಠಾಣೆಯಲ್ಲಿ ಈ ಕುರಿತಾಗಿ ಪ್ರಕರಣ ದಾಖಲಾಗಿದೆ. ಟಿಎಪಿಸಿಎಂಎಸ್ ನ ಹಿಂದಿನ ಮುಖ್ಯ ಕಾರ್ಯನಿರ್ವಾಹಕ ಶಿವರಾಜ, ಈಗಿನ ಮುಖ್ಯ ಕಾರ್ಯನಿರ್ವಾಹಕ ಶಿವಪ್ಪ, ಆಡಳಿತ ಮಂಡಳಿಯವರು ಸೇರಿಕೊಂಡು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ಧಾನ್ಯವನ್ನು ಸ್ವಂತ ಲಾಭಕ್ಕೆ ಬಳಸಿಕೊಂಡಿದ್ದಾರೆ ಎಂದು ಆಹಾರ ಇಲಾಖೆಯ ಉಪನಿರ್ದೇಶಕ ಭೀಮರಾಯ ಅವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.