ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ, ಕೆಲವರ ಖಾತೆಗೆ ಹೆಚ್ಚುವರಿ ಅಕ್ಕಿ ಹಣ ಜಮಾ ಆಗಿಲ್ಲ. ಹೀಗಾಗಿ 10 ಕೆಜಿ ಅಕ್ಕಿಯನ್ನೇ ಕೊಡಬೇಕೆಂಬ ಬೇಡಿಕೆ ಬಂದಿದೆ.
ಕೆಲವು ಜಿಲ್ಲೆಗಳಲ್ಲಿ ಅಕ್ಕಿ, ಕೆಲವು ಜಿಲ್ಲೆಗಳಲ್ಲಿ ಹಣಕ್ಕೆ ಬೇಡಿಕೆ ಬಂದಿದೆ. ರಾಜ್ಯ ಸರ್ಕಾರ ಅಕ್ಕಿ ಖರೀದಿಗೆ ಮುಂದಾಗಿದ್ದು, ಮುಂದಿನ ತಿಂಗಳಿಂದ ಖಾತೆಗೆ ಹಣ ಹಾಕುವ ಬದಲಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಲಾಗಿದೆ.
ಆದರೆ, ಈ ಬಗ್ಗೆ ಪರ, ವಿರೋಧ ಅಭಿಪ್ರಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾವಾರು ಸಮೀಕ್ಷೆ ನಡೆಸಿ ತೀರ್ಮಾನಿಸಲು ಆಹಾರ ಇಲಾಖೆ ಮುಂದಾಗಿದೆ. ಖಾತೆಗೆ ಹೆಚ್ಚುವರಿ ಅಕ್ಕಿಯ ಹಣ ಪಾವತಿಸಬೇಕೆಂದು ಕೆಲವರು ಹೇಳಿದರೆ, ಮತ್ತೆ ಕೆಲವರು ಅಕ್ಕಿಯನ್ನೇ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ವೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.