ಬೆಂಗಳೂರು: ಒಂದರಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಅಕ್ಕಿ, ಬೇಳೆ, ಗೋಧಿ, ಉಪ್ಪು ಹಾಗೂ ಸೂರ್ಯಕಾಂತಿ ಎಣ್ಣೆಯನ್ನು ನೀಡಲಾಗುವುದು.
2020ರ ನವೆಂಬರ್ ನಿಂದ 2021 ರ ಏಪ್ರಿಲ್ ವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ಬದಲಿಗೆ ಆಹಾರಧಾನ್ಯ ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕೋವಿಡ್ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಮಕ್ಕಳಿಗೆ ಆಹಾರಧಾನ್ಯಗಳನ್ನು ವಿತರಣೆ ಮಾಡುವಂತೆ ಶಾಲೆಗಳ ಮುಖ್ಯಸ್ಥರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿದ್ಯಾರ್ಥಿಗಳಿಗೆ ಆಹಾರಧಾನ್ಯಗಳನ್ನು ವಿತರಣೆ ಮಾಡುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.