alex Certify BREAKING : ಇದು ಬರೀ ಬೆಳಕಲ್ಲ, ದರ್ಶನ : ಕಾಂತಾರ ಚಾಪ್ಟರ್ -1 ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಇದು ಬರೀ ಬೆಳಕಲ್ಲ, ದರ್ಶನ : ಕಾಂತಾರ ಚಾಪ್ಟರ್ -1 ಫಸ್ಟ್ ಲುಕ್ ರಿಲೀಸ್

ಬೆಂಗಳೂರು : ನಟ, ನಿರ್ಮಾಪಕ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್ 1’ ಸಿನಿಮಾದ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ‘ನಿರ್ಮಾಪಕ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಾಪ್ಟರ್ 1 ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ.

ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಕಾಣಿಸಿಕೊಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ. ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಇದಕ್ಕೆ ‘ಇದು ಬರೀ ಬೆಳಕಲ್ಲ ದರ್ಶನ’ ಎಂಬ ಟ್ಯಾಗ್ ಲೈನ್ ನೀಡಲಾಗಿದೆ.

ರಿವೀಲ್ ಆದ ಫಸ್ಟ್ ಲುಕ್ ನಲ್ಲಿ ಇಂಗ್ಲಿಷ್ನಲ್ಲಿ “light…..Eveything is visibal in light. But this is just not light. Its a vision. Vision that choses what was, what is and what will be tomorrow..and you see’ ಎಂದು ರಿಷಬ್ ಹೇಳುತ್ತಾರೆ. ದಟ್ಟ ಗುಹೆಯಲ್ಲಿ ರುದ್ರಾಕ್ಷಿ ಮಾಲೆ ಧರಿಸಿ ನಿಂತಿರುವ ರಿಷಬ್ ಈ ಫಸ್ಟ್ ಲುಕ್ ನಲ್ಲಿ ಮಿಂಚಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...