ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಬೈಕ್ ಸವಾರರು ಕೊಚ್ಚಿ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ಘಟನೆ ನಡೆದಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಘಟಪ್ರಭಾ ನದಿಯಲ್ಲಿ ನೀರು ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ನಿಯಂತ್ರಣ ತಪ್ಪಿ ನದಿಗೆ ಬಿದ್ದ ಇಬ್ಬರೂ ಬೈಕ್ ಸವಾರರು ನದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಅವರಾದಿ ಗ್ರಾಮದ ಚೆನ್ನಪ್ಪ(30), ದುರ್ಗವ್ವ(25) ಘಟಪ್ರಭಾ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.
ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ ತೆರಳುವಾಗ ಘಟನೆ ನಡೆದಿದ್ದು, ಪೊಲೀಸರು, ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.