ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಬಳಿ ತುಂಗಭದ್ರಾ ನದಿಯಲ್ಲಿ ಮೂವರು ಸಹೋದರರು ನೀರು ಪಾಲಾಗಿದ್ದಾರೆ.
ಸಹೋದರರಾದ ಕಿರಣ್(14), ವರುಣ್(15), ಪವನ್(16) ಮೃತಪಟ್ಟವರು ಎಂದು ಹೇಳಲಾಗಿದೆ. ಹಿರೇಗೋಣಿಗೆರೆ ಗ್ರಾಮದ ಸಹೋದರರು ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ವೇಳೆಯಲ್ಲಿ ನೀರು ಪಾಲಾಗಿದ್ದಾರೆ. ವರುಣ್ ಮೃತ ದೇಹ ಪತ್ತೆಯಾಗಿದ್ದು, ಉಳಿದ ಇಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು, ಶಾಸಕ ರೇಣುಕಾಚಾರ್ಯ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.