ಮಡಿಕೇರಿ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಐಗುಂದ ಗ್ರಾಮದಲ್ಲಿ ಕೂಟಿಯಾಲ ಹೊಳೆಯಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.
ತಾಯಿ ಅಶ್ವಿನಿ(45), ಮಕ್ಕಳಾದ ನಿಖಿತಾ, ನವ್ಯಾ ಅವರ ಮೃತದೇಹಗಳು ಪತ್ತೆಯಾಗಿದೆ. ತಾಯಿ, ಮಕ್ಕಳು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.