ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಸಂಗಬೆಟ್ಟು ಸಮೀಪ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ವೀಟಾ ಅವರ ಸಾವಿನಿಂದ ಸೂತಕದ ಛಾಯೆ ಆವರಿಸಿದೆ.
ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ವೀಟಾ ಅವರು ನಂತರ ವಿಮಾ ಪ್ರತಿನಿಧಿಯಾಗಿದ್ದರು. ಅವರು ಹಣ ದ್ವಿಗುಣಗೊಳಿಸುವ ಆ್ಯಪ್ ನಂಬಿ 21 ಲಕ್ಷ ರೂ. ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರ್ಥಿಕ ಸಂಕಷ್ಟದಿಂದ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.