alex Certify ಕ್ರಿಸ್ಮಸ್ ಹೊತ್ತಲ್ಲೇ ಕುಟುಂಬಕ್ಕೆ ಶಾಕ್: ಹಣ ದ್ವಿಗುಣ ಆ್ಯಪ್ ನಿಂದ ವಂಚನೆಗೊಳಗಾದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಸ್ಮಸ್ ಹೊತ್ತಲ್ಲೇ ಕುಟುಂಬಕ್ಕೆ ಶಾಕ್: ಹಣ ದ್ವಿಗುಣ ಆ್ಯಪ್ ನಿಂದ ವಂಚನೆಗೊಳಗಾದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಸಂಗಬೆಟ್ಟು ಸಮೀಪ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ವೀಟಾ ಅವರ ಸಾವಿನಿಂದ ಸೂತಕದ ಛಾಯೆ ಆವರಿಸಿದೆ.

ಈ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ವೀಟಾ ಅವರು ನಂತರ ವಿಮಾ ಪ್ರತಿನಿಧಿಯಾಗಿದ್ದರು. ಅವರು ಹಣ ದ್ವಿಗುಣಗೊಳಿಸುವ ಆ್ಯಪ್ ನಂಬಿ 21 ಲಕ್ಷ ರೂ. ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರ್ಥಿಕ ಸಂಕಷ್ಟದಿಂದ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...