ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ವಿದ್ಯಾರ್ಥಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿ ಹೊನ್ನೆತಾಳು ಗ್ರಾಮ ವ್ಯಾಪ್ತಿಯ ವಾರಳ್ಳಿಯ ಧ್ರುವ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ಪದವಿ ಓದುತ್ತಿದ್ದ ಧ್ರುವ ವಾರಳ್ಳಿ ಸಮೀಪ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಮುಳುಗು ತಜ್ಞ ಕುರುವಳ್ಳಿ ಪ್ರಮೋದ್ ಪೂಜಾರಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರಗೆ ತೆಗೆದಿದ್ದಾರೆ. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.