alex Certify ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಇಬ್ಬರು ಸಾವು

ಉಡುಪಿ: ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ನೆಲ್ಲಿಕಟ್ಟೆ ಕ್ರಾಸ್ ಬಳಿ ಸೀತಾ ನದಿಯಲ್ಲಿ ಸ್ನಾನ ಮಾಡಲು ಇಳಿದ ಯುವಕರಿಬ್ಬರು ಮೃತಪಟ್ಟಿದ್ದಾರೆ.

ಯುವಕರಿಗೆ ಈಜು ಬಾರದ ಕಾರಣ ಮುಳುಗಿ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ದೀಪಕ್(34), ಸೀನು ಡೇನಿಯಲ್(40) ಮೃತಪಟ್ಟವರು ಎಂದು ಹೇಳಲಾಗಿದೆ. ದೀಪಕ್ ಶೃಂಗೇರಿಯಲ್ಲಿ ವೈದ್ಯರಾಗಿದ್ದು, ಸೀನು ಡೇನಿಯಲ್ ಶಿವಮೊಗ್ಗದ ಟೈಯರ್ ರಿಸೋಲ್ ಸೆಂಟರ್ ನಲ್ಲಿ ಉದ್ಯೋಗಿಯಾಗಿದ್ದಾರೆ.

ಇವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈಜಲು ನದಿಗೆ ಇಳಿದಾಗ ಘಟನೆ ನಡೆದಿದೆ. ಹೆಬ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...