ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿದೆ.
ಪ್ರವಾಹದಿಂದಾಗಿ ನಾವುಂದ ಗ್ರಾಮಕ್ಕೆ ನದಿಯ ನೀರು ನುಗ್ಗಿದ್ದು, ಗ್ರಾಮದ ನೂರಾರು ಮನೆಗಳು ಜಲಾವೃತಗೊಂಡಿವೆ. ಜಾನುವಾರುಗಳನ್ನು ರಕ್ಷಿಸಲು ಗ್ರಾಮಸ್ಥರು ಹರಸಾಹಸ ನಡೆಸಿದ್ದಾರೆ.
ಕೊಲ್ಲೂರು ಭಾಗದಿಂದ ಸೌಪರ್ಣಿಕಾ ನದಿ ನೀರು ರಭಸವಾಗಿ ಹರಿದು ಬರುತ್ತಿದೆ. ನಾವುಂದದ ಸಾಲ್ಬುಡ, ಕುದ್ರು ಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದೆ. 8 ವರ್ಷದಿಂದಲೂ ಗ್ರಾಮಸ್ಥರು ಪ್ರವಾಹ ಭೀತಿ ಎದುರಿಸುತ್ತಿದ್ದು, ನದಿಗೆ ತಡೆಗೋಡೆ, ಕಿಂಡಿ ಅಣೆಕಟ್ಟು ನಿರ್ಮಿಸುವಂತೆ ಆಗ್ರಹಿಸಿದ್ದಾರೆ. ಜನಪ್ರತಿನಿಧಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ನೆರೆ ಸಂತ್ರಸ್ಥರು ಮತ್ತೊಮ್ಮೆ ಮನವಿ ಮಾಡಿದ್ದಾರೆ.