
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾಂಗ್ರೆಸ್ ನ ಆಪರೇಷನ್ ಹಸ್ತದ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಬದುಕಿನಲ್ಲಿ ಬದಲಾವಣೆ ತಂದಿದ್ದು ಕಾಂಗ್ರೆಸ್, ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಹಲವು ನಾಯಕರು ಮುಂದೆ ಬರುತ್ತಿದ್ದಾರೆ. ನದಿ ನೀರು ಸಮುದ್ರ ಸೇರಲೇಬೇಕು. ನಾನು ಯಾರಿಗೂ ಟಿಕೆಟ್ ಭರವಸೆ ನೀಡಿಲ್ಲ. ಮುಖಂಡರು, ಶಾಸಕರ ಆಧಾರದ ಮೇಲೆ ತೀರ್ಮಾನ ಮಾಡಲಾಗುವುದು ಎಂದರು.
ಲೋಕಸಭೆ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕೆಂದು ಸಿಎಂ ಹಾಗೂ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ನಾವು ಆಯನೂರು ಮಂಜುನಾಥ್ ಗೂ ಟಿಕೆಟ್ ಭರವಸೆ ನೀಡಿಲ್ಲ ಎಂದು ಹೇಳಿದ್ದಾರೆ.