ಕೋಲಾರ: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ(96) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಐಸಿಯನಲ್ಲಿ ಅವರು 40 ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಾಳೆ ಸ್ವಗ್ರಾಮ ತೂಬಗೆರೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇಂದು ರಾತ್ರಿಯೇ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಸ್ಥಳಾಂತರ ಮಾಡಲಾಗುವುದು.
ಅಕ್ಟೋಬರ್ 19, 1925 ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಅವರು ಜನಿಸಿದರು. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಜಾಲಪ್ಪ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರಾಗಿ, ಸಹಕಾರ, ಗೃಹ, ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಚಿಕ್ಕಬಳ್ಳಾಪುರದಿಂದ ಲೋಕಸಭೆ ಸದಸ್ಯರಾಗಿ 4 ಸಲ ಆಯ್ಕೆಯಾದ ಅವರು ಕೆಂದ್ರದಲ್ಲಿ ಒಮ್ಮೆ ಜವಳಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಸಂಸತ್ತಿನ ವಿವಿಧ ಸಮಿತಿಗಳ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.