
ಬೆಂಗಳೂರು: ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸಂಪುಟ ಸೇರ್ಪಡೆ ವಿಚಾರದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ಪಕ್ಷದ ವರಿಷ್ಠರೊಂದಿಗೆ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಚರ್ಚೆ ನಡೆಸಿ ಒಪ್ಪಿಗೆ ಪಡೆಯಲಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮ್ಮನ್ನು ಪರಿಗಣಿಸುವಂತೆ ಬಿ.ಎಸ್. ಯಡಿಯೂರಪ್ಪ ಅವರ ಮಾಜಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಜೊತೆಗೆ ಇಂದು ಸಿಎಂ ಭೇಟಿಯಾದ ರಮೇಶ್ ಜಾರಕಿಹೊಳಿ ಚರ್ಚಿಸಿದ್ದಾರೆ ಎನ್ನಲಾಗಿದೆ.