ಧಾರವಾಡ: ನಿಶ್ಚಿತಾರ್ಥ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ 6 ಜನರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗಾಯಗೊಂಡಿದ್ದ ಬಾಲಕಿ ಮನುಶ್ರೀ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಬೆನಕಟ್ಟಿ ಗ್ರಾಮದ ಅನನ್ಯಾ (14), ಹರೀಶ್ (13), ಶಿಲ್ಪಾ (34), ನೀಲವ್ವ (60), ಮಧುಶ್ರೀ (20) ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಹಾಗೂ ಮನುಶ್ರೀ (16) ಮೃತರು.