alex Certify BIG NEWS: ಕಬ್ಬು ಲಾರಿ-ಟಿಟಿ ವಾಹನ ಡಿಕ್ಕಿ; ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಬ್ಬು ಲಾರಿ-ಟಿಟಿ ವಾಹನ ಡಿಕ್ಕಿ; ಇಬ್ಬರ ದುರ್ಮರಣ

ಕಲಬುರ್ಗಿ: ಕಬ್ಬಿನ ಲಾರಿ ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಂತಿದ್ದ ಕಬ್ಬಿನ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಅಪ್ಪರಾಯ್ ಬಿರಾದಾರ್ ಹಾಗೂ ಸಂಜುಕುಮಾರ್ ಮೃತರು.

ಗಾಯಾಳುಗಳನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನದಲ್ಲಿ 16 ಜನರು ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...