
ಹೈದರಾಬಾದ್: ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಆಂಧ್ರಪ್ರದೇಶದ ಮಠಂಪಲ್ಲಿ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಮೂಲದ ಐವರು ಸಾವನ್ನಪ್ಪಿದ್ದು, 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಮೂಲದ ಭಕ್ತರು ತಿರುಪತಿಗೆ ಪ್ರವಾಸ ಕೈಗೊಂಡಿದ್ದರು. ದೇವರ ದರ್ಶನ ಪಡೆದು ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದಾಗ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ಕ್ರೂಸರ್ ವಾಪನ ಅಪಘಾತಕ್ಕಿಡಾಗಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ವಾಹನದಲ್ಲಿ ಸಿಲುಕಿದ್ದ ಮೃತದೇಹವಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳಿಗೆ ರುಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.