alex Certify ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳ ಸಾವು

ಅಮೆರಿಕಾದ ಮೆಸಾಚುಸೆಟ್ಸ್ ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ವಿದ್ಯಾರ್ಥಿಗಳು ಅಮೆರಿಕಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದ್ದು, ಬೆಳಗಿನ ಜಾವ ಐದು ಮೂವತ್ತರ ಸುಮಾರಿಗೆ ಇವರುಗಳು ಬರುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರೆ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾವನ್ನಪ್ಪಿದವರನ್ನು ಪ್ರೇಮ್ ಕುಮಾರ್ ರೆಡ್ಡಿ, ಪಾವನಿ ಗೊಲ್ಲಪಲ್ಲಿ ಹಾಗೂ ಸಾಯಿ ನರಸಿಂಹ ಪಟ್ಟಂ ಶೆಟ್ಟಿ ಎಂದು ಗುರುತಿಸಲಾಗಿದೆ. ಮನೋಜ್ ರೆಡ್ಡಿ, ಶ್ರೀಧರ್ ರೆಡ್ಡಿ, ವಿಜಿತ್ ರೆಡ್ಡಿ ಹಾಗೂ ಹಿಮಾ ಐಶ್ವರ್ಯ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...