alex Certify ಗುಂಡಿಗಳಿದ್ದ ರಸ್ತೆಯಲ್ಲಿ ಕುಲುಕಾಟ: ಆಂಬುಲೆನ್ಸ್ ನಲ್ಲೇ ಹೆರಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಂಡಿಗಳಿದ್ದ ರಸ್ತೆಯಲ್ಲಿ ಕುಲುಕಾಟ: ಆಂಬುಲೆನ್ಸ್ ನಲ್ಲೇ ಹೆರಿಗೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಸಮೀಪ ಗುಂಡಿ ಬಿದ್ದ ರಸ್ತೆಯಲ್ಲೇ ಸಾಗುವಾಗ ಕುಲುಕಾಟದಿಂದ ಗರ್ಭಿಣಿಯೊಬ್ಬರು ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಬಂಡಿಪುರ ಕಾಡಂಚಿನ ಕಣಿಯನಪುರದ ಅನುಶ್ರೀ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಂಬುಲೆನ್ಸ್ ನಲ್ಲಿ ಗುಂಡ್ಲುಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ದೊಡ್ಡ ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ವಾಹನ ಸಂಚರಿಸುವಾಗ ಕುಲುಕಾಟವಾಗಿ ಹೆರಿಗೆ ನೋವು ಜಾಸ್ತಿಯಾಗಿದೆ.

ಚಾಲಕ ಪ್ರಭು ಕೂಡಲೇ ರಸ್ತೆ ಬದಿ ಆಂಬುಲೆನ್ಸ್ ನಿಲ್ಲಿಸಿ ಆರೋಗ್ಯ ಸಿಬ್ಬಂದಿ ಬಂಗಾರು ನೆರವಿನಿಂದ ಹೆರಿಗೆ ಮಾಡಿಸಿದ್ದಾರೆ. ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...