ಮಂಗಳೂರು: ನಗರದ ಕಂಕನಾಡಿ ಮಸೀದಿ ಮುಂಭಾಗ ಸಾರ್ವಜನಿಕರ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ದಾಖಲಿಸಿಕೊಂಡಿದ್ದ ಸುಮೊಟೊ ಪ್ರಕರಣವನ್ನು ಪೊಲೀಸರು ಕೈಬಿಟ್ಟಿದ್ದಾರೆ. ಕೇಸು ದಾಖಲಿಸಿದ ಅಧಿಕಾರಿಯನ್ನು ರಜೆ ಮೇಲೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.
ರಸ್ತೆಯಲ್ಲಿ ನಮಾಜ್ ಮಾಡಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾರ್ವಜನಿಕರ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಈ ಬಗ್ಗೆ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿ ಗಣೇಶೋತ್ಸವ, ದೇವರ ಉತ್ಸವ, ಮೆರವಣಿಗೆಗಳಲ್ಲೂ ರಸ್ತೆ ಸಂಚಾರಕ್ಕೆ ಅಡ್ಡಿಯಾಗುತ್ತದೆ. ಆಗಲೂ ಕೇಸ್ ದಾಖಲಿಸಲಾಗುತ್ತದೆಯೇ ಎಂಬ ಹೇಳಲಾಗಿತ್ತು.
ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಮಂಗಳೂರು ನಗರ ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣ ವಾಪಸ್ ಪಡೆದು ಪ್ರಕರಣ ದಾಖಲಿಸಿದ ಅಧಿಕಾರಿಯನ್ನು ರಜೆ ಮೇಲೆ ತೆರಳಲು ಸೂಚಿಸಲಾಗಿದೆ ಎನ್ನಲಾಗಿದೆ.