
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮತ್ತೊಂದು ಘಟನೆ ನಡೆದಿದೆ.
ಬೆಂಗಳೂರಿನ ನಡು ರಸ್ತೆಯಲ್ಲಿ ಮುಸ್ಲೀಂರು ನಮಾಜ್ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇರದ ಸಿದ್ದಾಪುರ ವಾರ್ಡ್ ನಲ್ಲಿರುವ ಅತೀಕ್ ಮಸೀದಿ ಬಳಿ ಮುಸ್ಲಿಂರು ನಡುರಸ್ತೆಯಲ್ಲಿ ನಮಾಜ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಮಸ್ಜಿದ್ ಮುಖ್ಯಸ್ಥರ ವಿರುದ್ಧ ಹಿಂದೂಪರ ಸಂಘಟನೆ ಹೋರಟಗಾರ ತೇಜಸ್ ಗೌಡ ಎಂಬುವವರು ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಸ್ಲಿಂ ರು ರಸ್ತೆಯಲ್ಲಿ ನಮಾಜ್ ಮಾಡುತ್ತಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಾರ್ವಜನಿಕ ರಸ್ತೆಯಲ್ಲಿ ಈ ರೋತಿ ಪ್ರಾರ್ಥನೆ ಮಾಡುವುದು ಕಾನೂನು ಬಾಹಿರ. ಅನ್ಯಕೋಮಿನ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಅತೀಕ್ ಮಸೀದಿ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.