alex Certify ರಸ್ತೆ ಗುಂಡಿಗೆ ಬಲಿಯಾದ ನಿವೃತ್ತ ಯೋಧ: ಗುಂಡಿ ತಪ್ಪಿಸಲು ಹೋಗಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಗುಂಡಿಗೆ ಬಲಿಯಾದ ನಿವೃತ್ತ ಯೋಧ: ಗುಂಡಿ ತಪ್ಪಿಸಲು ಹೋಗಿ ಸ್ಥಳದಲ್ಲೇ ಸಾವು

ಮಂಡ್ಯ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ನಿವೃತ್ತ ಯೋಧ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕಾರೆಮನೆ ಗೇಟ್ ಬಳಿ ನಡೆದಿದೆ.

ಸಾತನೂರಿನ ಎಸ್.ಎನ್. ಕುಮಾರ್(39) ಮೃತಪಟ್ಟವರು. ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಅವರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿವೃತ್ತಿ ನಂತರ ಪೊಲೀಸ್ ಹುದ್ದೆಗೆ ಆಯ್ಕೆಯಾಗಿದ್ದ ಕುಮಾರ್ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದರು. ಊರಿಗೆ ಬಂದಿದ್ದ ಅವರು ತಂದೆಯೊಂದಿಗೆ ಬೈಕ್ ನಲ್ಲಿ ತೆರಳುವಾಗ ರಸ್ತೆ ಗುಂಡಿ ತಪ್ಪಿಸಲು ಎಡಕ್ಕೆ ಚಲಿಸಿದ್ದು, ಎದುರಿನಿಂದ ಬಂದ ಬೈಕ್ ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬರುತ್ತಿದ್ದ ಲಾರಿ ಅವರ ತಲೆಯ ಮೇಲೆ ಹರಿದಿದೆ. ಹೆಲ್ಮೆಟ್ ಧರಿಸಿದ್ದರೂ ತಲೆ ಛಿದ್ರಗೊಂಡು ಮಿದುಳು ಹೊರ ಬಂದಿದೆ.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಕಾರೆಮನೆ ಗೇಟ್ ಬಳಿ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ರಸ್ತೆ ದುರಸ್ತಿ ಮಾಡದ ಕಾರಣ ಪ್ರತಿ ದಿನ ಅಪಘಾತಗಳು ಸಂಭವಿಸುತ್ತಿವೆ. ಅಧಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣವೆಂಬ ಆರೋಪ ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...