alex Certify BIG NEWS: 1 ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾದ ಕಾಂಗ್ರೆಸ್ ನಾಯಕ ಸಿಧು ಶರಣಾಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1 ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾದ ಕಾಂಗ್ರೆಸ್ ನಾಯಕ ಸಿಧು ಶರಣಾಗತಿ

ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಒಂದು ವರ್ಷ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಾಟಿಯಾಲ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ.

ಸಿಧು ಅವರು ಶರಣಾಗುವ ಮೊದಲು ತಮ್ಮ ವೈದ್ಯಕೀಯ ತಪಾಸಣೆ ನೆಪವೊಡ್ಡಿ ಕೆಲವು ವಾರಗಳ ಕಾಲಾವಕಾಶವನ್ನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ಪೀಠ, ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರನ್ನು ಸಂಪರ್ಕಿಸಲು ಹೇಳಿದೆ.

ಮೂರು ದಶಕಗಳಷ್ಟು ಹಳೆಯದಾದ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ವಿರುದ್ಧದ ಶಿಕ್ಷೆಯ ವಿಷಯದ ಮರುಪರಿಶೀಲನಾ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಪ್ರಕರಣದಲ್ಲಿ ಅವರಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.  ಪ್ರಕರಣದಲ್ಲಿ 65 ವರ್ಷದ ಗುರ್ನಾಮ್ ಸಿಂಗ್‌ ಗೆ ನೋವುಂಟು ಮಾಡಿದ ಅಪರಾಧಕ್ಕಾಗಿ ಸಿಧು ಅವರನ್ನು ಮೇ 2018 ರಲ್ಲಿ ಸುಪ್ರೀಂ ಕೋರ್ಟ್ ತಪ್ಪಿತಸ್ಥರೆಂದು ಪರಿಗಣಿಸಿದ್ದರೂ, ಅದು ಅವರಿಗೆ ಜೈಲು ಶಿಕ್ಷೆಯನ್ನು ತಪ್ಪಿಸಿ  1,000 ರೂ. ದಂಡ ವಿಧಿಸಿತ್ತು.

ಸೆಪ್ಟೆಂಬರ್ 2018 ರಲ್ಲಿ, ಮೃತರ ಕುಟುಂಬ ಸದಸ್ಯರು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿತ್ತು. ಸೆಪ್ಟೆಂಬರ್ 1999 ರಲ್ಲಿ ವಿಚಾರಣಾ ನ್ಯಾಯಾಲಯ ಸಿಧು ಅವರನ್ನು ಕೊಲೆ ಆರೋಪದಿಂದ ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಹೈಕೋರ್ಟ್ ರದ್ದುಗೊಳಿಸಿತು. ಡಿಸೆಂಬರ್ 2006 ರಲ್ಲಿ ಸಿಧು ಮತ್ತು ಸಹಚರ ಸಂಧು ತಪ್ಪಿತಸ್ಥರೆಂದು ತೀರ್ಪು ನೀಡಿತು. ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ತಲಾ 1 ಲಕ್ಷ ರೂ. ದಂಡ ವಿಧಿಸಿತ್ತು. ಸುಪ್ರೀಂ ಕೋರ್ಟ್ ಸಂಧು ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...