alex Certify ನಾಳೆ ರಾಜ್ಯಕ್ಕೆ ಅಮಿತ್ ಶಾ: ತೇಜಸ್ವಿ ಸೂರ್ಯ ಪರ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ರಾಜ್ಯಕ್ಕೆ ಅಮಿತ್ ಶಾ: ತೇಜಸ್ವಿ ಸೂರ್ಯ ಪರ ಭರ್ಜರಿ ಪ್ರಚಾರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದು, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಈ ಮೊದಲು ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು. ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಏಪ್ರಿಲ್ 23ರಂದು ಸಂಜೆ 7 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 7:30ಕ್ಕೆ ಬೊಮ್ಮನಹಳ್ಳಿ ಸರ್ಕಲ್ ನಿಂದ ಐಐಎಂಬಿ, ಬನ್ನೇರುಘಟ್ಟ ರಸ್ತೆ, ಬಿಳೇಕಹಳ್ಳಿವರೆಗೂ ರೋಡ್ ಶೋ ನಡೆಸಲಿದ್ದಾರೆ. ರಾತ್ರಿ 8.30 ರವರೆಗೆ ಪ್ರಚಾರ ನಡೆಸಲಿದ್ದು, ನಂತರ ಹೆಚ್ಎಎಲ್ ಗೆ ತೆರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...